Wednesday, February 4, 2026
HomeKarnatakaದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ,ರೊಟ್ಟಿ ವ್ಯಾಪಾರ ಮಾಡಿ ಮಹಾಂತೇಶ್ ಬೀಳಗಿ ಸಾಕಿದ್ದ ತಾಯಿ, IAS ಅಧಿಕಾರಿ...

ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ,ರೊಟ್ಟಿ ವ್ಯಾಪಾರ ಮಾಡಿ ಮಹಾಂತೇಶ್ ಬೀಳಗಿ ಸಾಕಿದ್ದ ತಾಯಿ, IAS ಅಧಿಕಾರಿ ಹುಟ್ಟೂರಿನಲ್ಲಿ ನೀರವ ಮೌನ!!

ಕಲಬುರಗಿ, (ನವೆಂಬರ್ 25): ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS Officer Mahantesh Bilagi) ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಂದು (ನವೆಂಬರ್ 25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments