Friday, February 6, 2026
HomeBengaluruಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು ಬೆಂಗಳೂರು: ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆ ಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ತಿಳಿಸಿದರು.ಇದಕ್ಕೆ ಉತ್ತರಿಸಿದ ಸಚಿವರು, ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ ಎಂದರು. ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಚುನಾವಣೆಯ ಮಾಹಿತಿಯನ್ನು ನೀಡಿದರು ಪ್ರಿಯಾಂಕ ಖರ್ಗೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments