Sunday, June 14, 2026
HomeUncategorizedಕೆ ಆರ್ ಪೇಟೆ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ ಎಂ ನರೇಂದ್ರ ಸ್ವಾಮಿ ಅವರಿಗೆ ಮುಖ್ಯಮಂತ್ರಿ...

ಕೆ ಆರ್ ಪೇಟೆ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ ಎಂ ನರೇಂದ್ರ ಸ್ವಾಮಿ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಚ ಸಚಿವ ಸಂಪುಟಕ್ಕೆ ಸಚಿವರಾಗಿ ಆಯ್ಕೆ ಮಾಡಿಕೊಳ್ಳುವಂತೆ ಪುರಸಭಾ ಸದಸ್ಯ ಡಿ ಪ್ರೇಂಕುಮಾರ್ ಅವರು ತಾಲ್ಲೂಕಿನ ದಲಿತಪರ ಸಂಘಟನೆ ಹಾಗೂ ತಾಲ್ಲೂಕು ಛಲವಾದಿ ಮಹಾಸಭಾದ ಪರವಾಗಿ ಕಾಂಗ್ರೆಸ್ ಸರ್ಕಾರ ಹಾಗೂ ‌ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಒತ್ತಾಯ ಮಾಡಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.ಒಂದು ಬಾರಿ ಪಕ್ಷೇತರ ಶಾಸಕರಾಗಿ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.ದಲಿತರ ಪರವಾಗಿ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಕೃಷ್ಣರಾಜಪೇಟೆ ತಾಲ್ಲೂಕಿನ ಒಬ್ಬನೇ ಒಬ್ಬ ದಲಿತರನ್ನು ನಿಗಮ ಮಂಡಳಿಯ ಅಧ್ಯಕ್ಷರಾಗಿ ಮಾಡಿಲ್ಲ ಎಂದು ಇದೇ ಸಮಯದಲ್ಲಿ ಪುರಸಭಾ ಸದಸ್ಯ ಡಿ ಪ್ರೇಂಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.ಬಲಗೈ ಸಮುದಾಯವು ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತವನ್ನು ನೀಡುತ್ತಾ ಬಂದಿದ್ದಾರೆ. ನಮ್ಮನ್ನು ಮತಬ್ಯಾಂಕ್ ಗೆ ಮಾತ್ರ ಇಟ್ಟುಕೊಂಡಿದ್ದಾರೆ. ಅಧಿಕಾರ ಕೊಡಲು ಹಿಂದೇಟು ಹಾಕುತ್ತಿದ್ದಾರೆ.ಅರ್ಹತೆ ಇದ್ದರೆ ನಮ್ಮನ್ನು ಪರಿಗಣಿಸುವಂತೆ ತಿಳಿಸಿದರು.ಈ ಸಮಯದಲ್ಲಿ ಚಲವಾದಿ ಮಹಾಸಭಾದ ಕಾರ್ಯದರ್ಶಿ ಜೈನಹಳ್ಳಿ ಹರೀಶ್, ಮುದುಗೆರೆ ಮಹೇಂದ್ರ, ತಮ್ಮಯ್ಯ,ರವಿ,ಶಂಕರ್, ಕುಳ್ಳಪ್ಪ,ಗೋವಿಂದರಾಜು,ಪರಮೇಶ್, ಬಸವರಾಜು,ಯೋಗಿ ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments