Thursday, November 13, 2025
Google search engine
HomeBengaluruಕೆಜಿಎಫ್‌ 'ಚಾಚಾ' ಖ್ಯಾತಿಯ ಹರೀಶ್ ರಾಯ್ ನಿಧನ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ

ಕೆಜಿಎಫ್‌ ‘ಚಾಚಾ’ ಖ್ಯಾತಿಯ ಹರೀಶ್ ರಾಯ್ ನಿಧನ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು.ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ ಯಶ್ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಹಸ್ತ ಚಾಚಿದ್ದರು. ಕ್ಯಾನ್ಸರ್ ಮಹಾಮಾರಿಯಿಂದ ಹರೀಶ್ ರಾಯ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹರೀಶ್ ರಾಯ್ ವಿಧಿವಶರಾಗಿದ್ದಾರೆ.90 ರ ದಶಕದಲ್ಲಿ ಹಲವು ಸಿನಿಮಾಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ಹರೀಶ್ ರಾಯ್ ನಟಿಸಿದ್ದರು. ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ,ಮೀಂದುಮ್ ಒರು ಕಾದಲ್ ಕಧೈ, ಜೋಡಿ ಹಕ್ಕಿ, ತಾಯವ್ವ, ಅಂಡರ್ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ,ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಹರೀಶ್ ರಾಯ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments