Wednesday, February 4, 2026
HomeKarnatakaPandavapuraಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಸಾರ್ವಜನಿಕ ಶೌಚಾಲಯ ಉದ್ಘಾಟನೆ

ಪಾಂಡವಪುರ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ಸಾರ್ವಜನಿಕ ಶೌಚಾಲಯ ಉದ್ಘಾಟನೆ

ಸುಲಭ ಇಂಟರ್‌ನ್ಯಾಷನಲ್ ಮತ್ತು ಭಾರತ ಜನರಲ್ ಇನ್ಸುರೆನ್ಸ್ ಕಾರ್ಪೋರೇಷನ್ (GIC) ಸಹಕಾರದೊಂದಿಗೆ ₹35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಸಾರ್ವಜನಿಕ ಶೌಚಾಲಯವನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ರವರು ಉದ್ಘಾಟಿಸಿದರು.

ಮುಂದಿನ 30 ವರ್ಷಗಳ ಕಾಲ ಈ ಶೌಚಾಲಯದ ನಿರ್ವಹಣೆಯ ಜವಾಬ್ದಾರಿಯನ್ನು ಸುಲಭ ಇಂಟರ್‌ನ್ಯಾಷನಲ್ ವಹಿಸಿಕೊಂಡಿದ್ದು, ಸಾರ್ವಜನಿಕರಿಗೆ ದೀರ್ಘಕಾಲಿಕ ಅನುಕೂಲ ಒದಗಿಸುವ ನಿರೀಕ್ಷೆಯಿದೆ. ಈ ಸೌಲಭ್ಯದಿಂದ ರೋಗಿಗಳು, ಆಸ್ಪತ್ರೆ ಭೇಟಿ ದಾರರು ಹಾಗೂ ಸ್ಥಳೀಯ ನಿವಾಸಿಗಳು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ GIC ಯ ಹಿರಿಯ ಅಧಿಕಾರಿಗಳು, ಪಟ್ಟಣದ ಮುಖಂಡರು ಹಾಗೂ ರೈತ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments